ಜಯನಗರ ಪರಿಶೀಲನಾ

ಜಯನಗರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ, ಪೋಲಿಸ್ ಇಲಾಖೆ ಹಾಗೂ ಇತರ ಇಲಾಖೆಗಳ ಅಧಿಕಾರಿಗಳು ಮತ್ತು ಸಾರ್ವಜನಿಕರೊಂದಿಗೆ ಇಂದು ಪರಿಶೀಲನಾ ಸಭೆ ನಡೆಸಲಾಯಿತು.

ಜಯನಗರ ಪರಿಶೀಲನಾ
ನಾಗರಿಕರು ಅಸಮರ್ಪಕ ಕಸ ನಿರ್ವಹಣೆ ಸಮಸ್ಯೆಗಳ ಕುರಿತು ಹಲವು ದೂರುಗಳನ್ನು ಸಲ್ಲಿಸಿದ್ದು, ಎಲ್ಲೆಂದರಲ್ಲಿ ಕಸ ವಿಲೇವಾರಿ ಮಾಡುವ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ, ಶೀಘ್ರದಲ್ಲಿ ಈ ಅಸಮರ್ಪಕ ಕಸ ವಿಲೇವಾರಿಗೆ ಪರಿಹಾರ ಕಂಡುಕೊಳ್ಳಲು ಸೂಚಿಸಲಾಗಿದೆ.

ಹಲವು ನಾಗರಿಕರು ಮರಗಳ ನಿರ್ವಹಣೆ, ಮರ ಕಡಿಯುವುದಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ನೀರಸ ಪ್ರತಿಕ್ರಿಯೆ ಕುರಿತು ಗಮನ ಸೆಳೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶೀಘ್ರದಲ್ಲಿ ಬಾಕಿ ಇರುವ ಇಂತಹ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ತಿಳಿಸಲಾಗಿದೆ.

ಇಂದಿನ ಸಭೆಯಲ್ಲಿ ಅನೇಕರು, ಮಸೀದಿಗಳ ಅಜಾನ್ ನಿಂದ ಉಂಟಾಗುತ್ತಿರುವ ಸಮಸ್ಯೆ ಕುರಿತು ಗಮನ ಸೆಳೆದಿದ್ದು, ಪೋಲಿಸ್ ಇಲಾಖೆಗೆ ಸೂಚನೆ ನೀಡಿ ಸುಪ್ರೀಂ ಕೋರ್ಟ್ ಆದೇಶದನ್ವಯ, ನಿಯಮಿತ ಪ್ರಮಾಣದ ಡೆಸಿಬಲ್ ಗಳನ್ನು ಮೀರುವ ಮಸೀದಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪೋಲಿಸ್ ಇಲಾಖೆಗೆ ಆದೇಶಿಸಲಾಗಿದೆ.

ಸ್ಲಮ್ ಬೋರ್ಡ್ ನಿಂದ ಮೀಸಲಾಗಿರುವ ಮನೆಗಳನ್ನು ಹಲವರು ಅತಿಕ್ರಮಿಸಿಕೊಂಡಿರುವ ಕುರಿತು ನಾಗರಿಕರು ದೂರುಗಳನ್ನು ಸಲ್ಲಿಸಿದ್ದು, ಸ್ಲಮ್ ಬೋರ್ಡ್ ಅಧಿಕಾರಿಗಳಿಗೆ ಆದೇಶ ನೀಡಿ, ಸ್ವಾಧೀನ ಪತ್ರ ಹೊಂದಿರುವ ಫಲಾನುಭವಿಗಳಿಗೆ ಮಾತ್ರ ಮನೆಗಳಲ್ಲಿ ಇರಲು ಅವಕಾಶ ಕಲ್ಪಿಸಲು ತಿಳಿಸಲಾಗಿದೆ.

ಇದರೊಂದಿಗೆ ರಸ್ತೆಗಳು, ಫುಟ್ ಪಾತ್ ನಿರ್ಮಾಣ, ಸಾರ್ವಜನಿಕ ಶೌಚಾಲಯಗಳ ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ